ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನ ಊರು ತೊರೆಯುತ್ತಿದ್ದಾರೆ. ಅಲ್ಲದೆ ನಿನ್ನೆ ಹಾವೇರಿ ಜಿಲ್ಲೆಯಲ್ಲಿ ಹಲವು ಮಹಿಳೆಯರು ಮಾಂಗಲ್ಯ ಸರ ಪ್ಯಾಕ್ ಮಾಡಿ ಪೋಸ್ಟ್ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರ ಕಳುಹಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಭಾರಿ ಚರ್ಚೆಗೆ ಕಾರಣವಾಗಿತ್ತು.
ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಪತಿ ಸಾವಿನ ಬೆನ್ನಲೆ ಗೃಹ ಸಚಿವರಿಗೆ ಮಹಿಳೆಯೊಬ್ಬಳು ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿಯ ಠಾಣಾ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಮೃತ ಶರಣಬಸವ ಪತ್ನಿ ಪಾರ್ವತಿ ಸಚಿವ ಜಿ.ಪರಮೇಶ್ವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾರೆ. ಅಂಚೆಯ ಮೂಲಕ ಸಚಿವ ಜಿ ಪರಮೇಶ್ವರಿಗೆ ಮಾಂಗಲ್ಯ ಸರ ರವಾನೆ ಮಾಡಿದ್ದಾರೆ.
ಮೃತ ಶರಣಬಸವ ಪತ್ನಿ ಪಾರ್ವತಿ ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ನನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮಾಂಗಲ್ಯ ಸರ ರವಾನಿಸಿದ್ದಾಳೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಕೂಡ ಪಾರ್ವತಿ ದೂರು ನೀಡಿದ್ದಾಳೆ.ಮೃತ ಶರಣಬಸವ ಸುಮಾರು 6 ರಿಂದ 8 ಲಕ್ಷದವರೆಗೆ ಸಾಲ ಪಡೆದಿದ್ದ ಕೆಲವು ಕಂತುಗಳು ಬಾಕಿ ಹಿನ್ನೆಲೆಯಲ್ಲಿ ಫೈನಾನ್ಸ್ ಸಿಬ್ಬಂದಿಗಳು ಶರಣಬಸವನಿಗೆ ಕಿರುಕುಳ ನೀಡಲಾರಂಭಿಸಿದ್ದರು. ಜನವರಿ 17ರಂದು ಶರಣಬಸವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ.