ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಳಿಗ್ಗೆ ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣಗಳು ಒಡೆದು ಹಾಕಿದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ರಾಮ ಸೇನೆಯ 9 ಜನ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪರರ ನಲ್ಲಿದ್ದ ಗಾಜು ಪುಡಿ ಪುಡಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮ ಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ. ಪ್ರಸಾದ್ ಅತ್ತಾವರ್ ನೇತೃತ್ವದ ರಾಮ ಸೇನೆ ಸಂಘಟನೆಯ ಕಾರ್ಯಕರ್ತರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದು ಮೊದಲು ರಾಮಸೇನೆ ಸಂಸ್ಥಾಪಕ ಪ್ರಸಾದ ಅವಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.