ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಪಾಪಿಗಳು ಮುಳ್ಳಿನ ಪೊದೆಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
ಮುಧೋಳ ತಾಲೂಕಿನ ಹಲಗಲಿಯ ಬಳಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಪಾಪಿಗಳು ಎಸೆದು ಹೋಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ನವಜಾತಶವನ್ನು ರಕ್ಷಣೆ ಮಾಡಿ ಸ್ಥಳೀಯ ಹಲಗಲಿ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಕಳಿಸಿದ್ದಾರೆ. ಸದ್ಯ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಧೋಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.