ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಸ್ನಾನಕ್ಕೆಂದು ನೀರು ಕಾಯಿಸಲು ಹಚ್ಚಿದ್ದ ಬೆಂಕಿಯು ತೆಂಗಿನ ಮಟ್ಟೆ ರಾಶಿಗೆ ವ್ಯಾಪಿಸಿ ಮನೆಯೇ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಹೌದು ಕೊಡಗಾಪುರ ಗ್ರಾಮದ ವಿನೋದ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನೀರು ಕಾಯಿಸಲು ಬೆಂಕಿ ಹಂಚಿದ್ದ ವೇಳೆ ಹತ್ತಿರದಲ್ಲೇ ಇದ್ದ ತೆಂಗಿನಕಾಯಿ ಮಟ್ಟೆ ರಾಶಿಗೂ ಬೆಂಕಿ ಹೊತ್ತಿಕೊಂಡು ಬಳಿಕ ಮನೆಯೇ ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬದ ಸದಸ್ಯರೆಲ್ಲರೂ ಮನೆಯಿಂದ ಹೊರಗೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾಗಿ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮನೆಯಲ್ಲಿದ್ದ ಸರಕುಗಳು ಬೆಂಕಿಗೆ ಆಹುತಿಯಾಗಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.