ರಾಯಚೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ.
ಹೌದು, ಮೈಕ್ರೋ ಫೈನಾನ್ಸ್ ಗಳ ಕಡಿವಾಣಕ್ಕೆ ಹೊಸ ಪ್ಲಾನ್ ಮಾಡಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕ್ರೇಡಿಡ್ ಕೋ ಆಪರೇಟಿವ್ ಸೊಸೈಟ್ ಸ್ಥಾಪನೆ ಮಾಡಿ. ಕಡಿಮೆ ಬಡ್ಡಿದರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಳ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದ್ದು, ರಾಜಸ್ಥಾನ, ತೆಲಂಗಾಣದಲ್ಲಿ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಅಧಿಕಾರಿಗಳು ಅಧ್ಯಯನ ನಡೆಸಿ ಕಾರ್ಯರೂಪಕ್ಕೆ ತರಲಿದ್ದಾರೆ. ಹಣಕಾಸು ಇಲಾಖೆ ಜೊತೆಗೆ ಸಭೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಭೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನರು ಊರನ್ನು ತೊರೆಯುತ್ತಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಈ ಒಂದು ವಿಚಾರವಾಗಿ ಇಂದು ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಹೌದು, ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಸಭೆ ನಡೆಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.