ದಕ್ಷಿಣಕನ್ನಡ : ಹಾಸ್ಟೆಲ್ ನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನಲ್ಲಿ ನಡೆದಿದೆ.
ಮೂಡುಬಿದಿರೆಯ ಮಿಜಾರಿನ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಪಲ್ಗುಣಿ ಹಾಸ್ಟೆಲ್‌ನಲ್ಲಿ ಗುರುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯು ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಈ ವೇಳೆ ಮಗಳ ಸಾವಿನ ಬಗ್ಗೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ವಿರುದ್ಧ ದೂರು ನೀಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.