ಬೆಂಗಳೂರು : ನಾಳೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಬೆಳಿಗ್ಗೆ 7 ಗಂಟೆಯ ಬದಲಾಗಿ 1 ಗಂಟೆ ಬೇಗ ಅಂದರೆ 6 ಗಂಟೆಗೆನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ.
ಹೌದು ನಮ್ಮ ಮೆಟ್ರೊ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಸಂಚಾರ ಏಕಕಾಲಕ್ಕೆ ಆರಂಭಗೊಳ್ಳಲಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 20 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಾಗವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ, ಬಿಐಇಸಿ ನಡೆಯುತ್ತಿರುವ ಕಾರ್ಯಕ್ರಮ, ಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಈ ಕ್ರಮವನ್ನು ಕೈಗೊಂಡಿದೆ.
ಲಾಲ್‌ಬಾಗ್ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬಂದು ಹೋಗುವವರ ಅನುಕೂಲಕ್ಕಾಗಿ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಟೋಕನ್ ಬದಲಿಗೆ 30 ನೀಡಿ ಪೇಪರ್ ಟಿಕೆಟ್ ಖರೀದಿಸಬಹುದು. ನಗದು ಪಾವತಿಸಿ ಖರೀದಿಸಲು ಅವಕಾಶ ನೀಡಲಾಗಿದೆ. ಲಾಲ್‌ಬಾಗ್ ಮೆಟ್ರೊ ನಿಲ್ದಾಣದಲ್ಲಿ ಅಂದು ಪೇಪರ್ ಟಿಕೆಟ್ ಹೊರತುಪಡಿಸಿ ಟೋಕನ್ ನೀಡಲಾಗುವುದಿಲ್ಲ ಎಂದು BMRCL ಮಾಹಿತಿ ನೀಡಿದೆ.
ಇದರ ಜೊತೆ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ 20 ಹೆಚ್ಚುವರಿ ಮೆಟ್ರೋ ರೈಲುಗಳನ್ನು ಓಡಿಸಲು ಮುಂದಾಗಿದೆ. ಲಾಲ್‌ಭಾಗ್ ಮೆಟ್ರೋ ನಿಲ್ದಾಣದಲ್ಲಿ ಬೆ. 10 ರಿಂದ ರಾತ್ರಿ 8 ರವರೆಗೆ ಪೇಪರ್ ಟಿಕೆಟ್ ಸಿಗಲಿದೆ. ಪೇಪರ್ ಟಿಕೆಟ್ ಮೂಲಕ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ.
Among the 68 metro stations 🚉 in Bangalore, which one do you think had the lowest passenger count in December? The daily average is surprisingly low from that station 🚉
You are awesome if you can guess the closest number (daily average)! pic.twitter.com/18asd2SAKJ
— Bangalore Metro Updates (@WF_Watcher) January 25, 2025