ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಎಷ್ಟು ಜನರು ಊರು ಬಿಡುತ್ತಿದ್ದು ಇದುವರೆಗೂ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಐದು ಜನರು ಆತ್ಮಹತ್ಯೆ ಮಾಡಿಕೊಟ್ಟಿದ್ದಾರೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಮೈಕ್ರೋಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ಅವರ ಕಿರುಕುಳದಿಂದ ಜನರು ಊರು ಬಿಡುತ್ತಿದ್ದಾರೆ.ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಮೀಟರ್ ಬಡ್ಡಿ ದಂಧೆ, ಜೂಜು, ಡ್ರಗ್ಸ್ ದಂಧೆ ನಡುವೆ ಲಿಂಕ್ ಇದೆ. ಎಲ್ಲಾ ದಂಧೆಗಳು ಒಂದಕ್ಕೊಂದು ಸಂಬಂಧ ಇರುವಂತಹ ವ್ಯವಹಾರವಾಗಿವೆ. ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದರು.