ಬೆಳಗಾವಿ : ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಬೈಲಹೊಂಗಲ ಸಮೀಪ ನಾಯಿ ಅಡ್ಡ ಬಂದಿತು ಎಂದು ಅದರ ಪ್ರಾಣ ಉಳಿಸಲು ಹೋಗಿ ಕಳೆದ ಕೆಲವು ದಿನಗಳ ಹಿಂದೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಅಪಘಾತದಲ್ಲಿ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿತವಾಗಿತ್ತು. ಇದೀಗ 13 ದಿನಗಳ ನಂತರ ಚಿಕಿತ್ಸೆ ಪಡೆದು ಇಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಕಾಯ್ಕೊಂಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ವೈದ್ಯರು ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿತವಾಗಿದ್ದು, ಕತ್ತಿಗೆ ಗಾಯವಾಗಿದೆ ಎಂದು ತಿಳಿಸಿದ್ದರು. ಕಳೆದ 13 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.