ಬೆಂಗಳೂರು : ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಇದೀಗ ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ್ದಾರೆ.
ಕಳೆದ ಒಂದು ತಿಂಗಳ ಬಳಿಕ ತಾಯ್ನಾಡಿಗೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ನಟ ಶಿವರಾಜ್ ಕುಮಾರ್ ಇದೀಗ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಕಳೆದ ಒಂದು ತಿಂಗಳ ಹಿಂದೆ ಅಮೆರಿಕಾಗೆ ತೆರಳಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿ ಬಳಿಕ ಇದೀಗ ಇಂದು ಬೆಂಗಳೂರಿಗೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದಾರೆ.
ಈ ವೇಳೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿದ್ದಾರೆ. ನಟ ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಲು ಅರ್ಜುನ್ಯ ಆಗಮಿಸಿದ್ದಾರೆ. ಶಿವಣ್ಣ ಸ್ವಾಗತಕ್ಕೆ ನಟ ಶಿವರಾಜ್ ಕುಮಾರ್ ಅಭಿಮಾನಿಗಳು ಕೂಡ ಇದೀಗ ಏರ್ಪೋರ್ಟಿಗೆ ಆಗಮಿಸಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತಕ್ಕೆ ಆಗಮಿಸಿದ್ದಾರೆ.