ಬೆಂಗಳೂರು : ಅನಾರೋಗ್ಯದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಬೆಂಗಳೂರಿಗೆ ಇಂದು ವಾಪಸ್ಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಿನಿಮಾ ಸೆಲೆಬ್ರಿಟಿಗಳು, ಆಪ್ತರು ಶಿವಣ್ಣ ಅವರನ್ನು ಸ್ವಾಗತಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬರುತ್ತಲೇ ಎಲ್ಲರೆಡೆ ಮುಗುಳ್ನಗುತ್ತಾ ಕೈಬೀಸಿದ ಶಿವಣ್ಣ, ತಮ್ಮ ಸ್ವಾಗತಕ್ಕೆ ಆಗಮಿಸಿದವರನ್ನು ತಬ್ಬಿ ಸಂತಸ ಪಟ್ಟರು.
ವಿಮಾನ ನಿಲ್ದಾಣದ ಬಳಿಯ ಟೋಲ್ ಗೇಟ್ನಲ್ಲಿ ಅಭಿಮಾನಿಗಳು ಶಿವಣ್ಣನಿಗೆ ಸೇಬು ಹಣ್ಣಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಶಿವಣ್ಣ ಸಹ ಕಾರು ನಿಲ್ಲಿಸಿ ಅಭಿಮಾನಿಗಳು ಸ್ವಾಗತ ಸ್ವೀಕರಿಸಿದ್ದಾರೆ. ಸ್ವಾಗತ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿ, ಮಾನ್ಯತಾ ಟೆಕ್ ಪಾರ್ನ್ನ ಮನೆಯತ್ತ ಪ್ರಯಾಣ ಬೆಳೆಸಿದ್ದಾರೆ.