ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ ಕಾಂಗ್ರೆಸ್ ನಾಯಕರಿಗೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾತನಾಡದಂತೆ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂದು ಖಡಕ್ ವಾರ್ನಿಂಗ್ ನೀಡಿದರು. ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಸೆಂಟ್ ಕುಮಾರ್ ಅವರು ಮಾತನಾಡಿ, ಕೆಲವು ಫ್ಯಾಮಿಲಿ ವಿಷಯಗಳನ್ನು ಬಹಿರಂಗವಾಗಿ ಹೇಳಿಕೆ ನೀಡಲು ಆಗಲ್ಲ ಎಂದು ತಿಳಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಂದು ಕುಟುಂಬ. ಇಲ್ಲಿ ದಯಾದಿ ಕಲಹ ಇಲ್ಲ ಮೊನ್ನೆ ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಇದನ್ನೇ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಕೆಲವು ಫ್ಯಾಮಿಲಿ ವಿಷಯಗಳನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಈ ಆಫೀಸ್ ಮಲ್ಲಿಕಾರ್ಜುನ ಖರ್ಗೆ ಕಟ್ಟಿಸಿದ ಆಫೀಸ್. ಕಟ್ಟಡಕ್ಕೆ ನಾನು ಹೊರಗಡೆ ಮುಖವಾಡ ಬದಲಾಯಿಸಿದ್ದೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.