ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಕಬ್ಬಿಣ ಪೈಪ್ ತುಂಬಿದ್ದ ಲಾರಿ ಪಲ್ಟಿಯಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬಿಣ ಪೈಪ್ ತುಂಬಿದ್ದ ಲಾರಿ ಪಲ್ಟಿಯಾಗಿದೆ. ಲಾರಿ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.
ಲಾರಿ ಪಲ್ಟಿಯಾದ ಪರಿಣಾಮ ಕಬ್ಬಿಣದ ಪೈಪ್ ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.