ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ ಸಹೋದರಿ ಎಂದು ಹೇಳಿ ಐಶ್ವರ್ಯಗೌಡ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ರೇಖಾ ಎನ್ನುವ ಮಹಿಳೆ ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿ ಸೇರಿದಂತೆ ಹಲವಾರು ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು ಸಾಲ ಕೊಡಿಸುವ ನೆಪದಲ್ಲಿ ರೇಖಾ ಎಂಬುವರು ಆನೇಕ ಜನರಿಗೆ ನೂರಾರು ಕೋಟಿ ವಂಚನೆ ಮಾಡಿರುವುದು ಬಯಲಾಗಿದೆ. ಉದ್ಯಮಿಯೊಬ್ಬರಿಗೆ 25 ಕೋಟಿ ರೂ. ಆಸೆ ತೋರಿಸಿ, ಬರೋಬ್ಬರಿ 5.75 ಕೋಟಿ ರೂ. ವಂಚಿಸಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಆರೋಪಿ ರೇಖಾಳನ್ನು ಬಂಧಿಸಿದ್ದಾರೆ.
ಕಳೆದ 2023ರಲ್ಲಿ ಉದ್ಯಮಿ ಹಾಗೂ ರೇಖಾಗೆ ಪರಸ್ಪರ ಪರಿಚಯವಾಗುತ್ತೆ. ನಾನು ಟವರ್ ದುರಂತದ ಪ್ರತ್ಯಕ್ಷ ಸಾಕ್ಷಿ, ನಾನು ಸಾಕ್ಷಿ ಹೇಳದಂತೆ ಮಾಲೀಕರು ಆಫರ್ ಮಾಡಿದ್ದಾರೆ. 25 ಕೋಟಿ ರೂ. ಕೊಡುತ್ತೇನೆ ಅಂದಿದ್ದಾರೆ. ನನ್ನ ಖಾತೆಯಲ್ಲಿದ್ದ 6 ಕೋಟಿ ರೂ. ಇದೆ. ಹೀಗಾಗಿ, ಇಡಿ ಮತ್ತು ಐಟಿ ನನ್ನ ಖಾತೆ ಸೀಜ್ ಮಾಡಿವೆ. ಆದರೆ, ಹಣ ರಿಲೀಸ್ ಮಾಡಿಸಲುಕೆ ನನಗೆ ಹಣ ಬೇಕಾಗಿದೆ ಅಂತ ಉದ್ಯಮಿಯನ್ನು ನಂಬಿಸಿ 5.75 ಕೋಟಿ ರೂ. ಪಡೆದಿದ್ದಾಳೆ.
ಇನ್ನು ಪ್ರಕರಣ ಸಂಬಂಧ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾತನಾಡಿ, 6 ಕೋಟಿ ಹಣ ಪಡೆದು ವಂಚಿಸಿದ್ದ ಮೂವರನ್ನು ಸಿಸಿಬಿ ಬಂಧಿಸಿದೆ. ಕಾರ್ಲಟನ್ ಟೌನ್ ಹೆಸರಲ್ಲಿ ಕಥೆ ಸೃಷ್ಟಿಸಿ 7 ಲಕ್ಷ ರೂ. ಕೇಳಿದ್ದಳು. ಬಳಿಕ ಹಂತಹಂತವಾಗಿ 5.75 ಕೋಟಿ ರೂ. ಪಡೆದುಕೊಂಡಿದ್ದಳು. ಪ್ರಕರಣ ಸಂಬಂಧ ಮಹಿಳೆ ಸೇರಿ ಮೂವರ ಆರೋಪಿಗಳ ಬಂಧನವಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.