ಯಾದಗಿರಿ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಎಷ್ಟೋ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಯಾದಗಿರಿಯಲ್ಲಿ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೇ ಇದೀಗ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ.
ಹೌದು ಸುರಪುರದ ರಂಗಂಪೇಟ ಬಡಾವಣೆಯಲ್ಲಿ ಮಲ್ಲಿಕಾರ್ಜುನ (40) ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಲ್ಲಿಕಾರ್ಜುನ ಮಹಾಲಕ್ಷ್ಮಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಫೈನಾನ್ಸಲ್ಲಿ ಪಿಗ್ಮಿ ಕಲೆಕ್ಟ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ 5 ಲಕ್ಷ ಹಣವನ್ನು ಫೈನಾನ್ಸ್ ಗೆ ಕಟ್ಟದೆ ಸ್ವಂತಕ್ಕೆ ಬಳಸಿದ ಆರೋಪ ಕೇಳಿ ಬಂದಿದೆ.
ಹಾಗಾಗಿ ಹಣ ಕಟ್ಟುವಂತೆ ಮಹಾಲಕ್ಷ್ಮಿ ಫೈನಾನ್ಸ್ ಮಾಲೀಕರು ಒತ್ತಡ ಹೇರಿದ್ದಾರೆ.ಇದರಿಂದ ಮನನೊಂದ ಮಲ್ಲಿಕಾರ್ಜುನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.