ಚಿತ್ರದುರ್ಗ : ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Cyber Security and Internet Safety” ವಿಷಯದ ಮೇಲೆ 2025ರ ಫೆಬ್ರವರಿ 05 ರಿಂದ 7 ರವರೆಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ.
ಈ ಕಾರ್ಯಾಗಾರದಲ್ಲಿ “Cyber Security and Internet Safety , ನಡೆಯುತ್ತಿರುವ ಆನ್ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಪೆÇೀಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಆಸಕ್ತ ಜನ ಸಾಮಾನ್ಯರು ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಫೆ.03ರೊಳಗಾಗಿ (Google form-https://forms.gle/9Fds6N5vjzLpjNGX7) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ವೈಜ್ಞಾನಿಕಾಧಿಕಾರಿ ಶ್ರೀನಿವಾಸು, (ಮೊ 9620767819) ಹಾಗೂ ಚಂದ್ರಶೇಖರಮೂರ್ತಿ (ಮೊ. 9686449019) ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿ ವೆಬ್ಸೈಟ್- http://kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.
Good News: ರೈತರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಕಡಲೇಕಾಳು ಉತ್ಪನ್ನ ಖರೀದಿ
ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!