ನವದೆಹಲಿ: ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ವಿರುದ್ಧದ ಸಿಐಡಿ (ಅಪರಾಧ ತನಿಖಾ ಇಲಾಖೆ) ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ
ಬಾಲಯ್ಯ ಬಿ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪ್ರಸನ್ನ ಬಿ ವರಲೆ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ನಮ್ಮನ್ನು ಕ್ಷಮಿಸಿ. ನಾವು ಅದನ್ನು ತಿರಸ್ಕರಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಟಿಡಿಪಿ ಮುಖ್ಯಸ್ಥರ ವಿರುದ್ಧದ ಏಳು ಪ್ರಕರಣಗಳನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸುವಂತೆ ಬಾಲಯ್ಯ ತಮ್ಮ ಅರ್ಜಿಯಲ್ಲಿ ಕೋರಿದ್ದರು.
ಟಿಡಿಪಿ ನೇತೃತ್ವದ ಪ್ರಸ್ತುತ ರಾಜ್ಯ ಆಡಳಿತವು ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆ ಮತ್ತು ಕ್ರಿಮಿನಲ್ ದುರುಪಯೋಗದ ಆರೋಪಗಳನ್ನು ಒಳಗೊಂಡಿರುವ ಪ್ರಕರಣಗಳ ತನಿಖೆಗೆ ಅಡ್ಡಿಪಡಿಸಲು ತನ್ನ ಪ್ರಭಾವವನ್ನು ಬಳಸುತ್ತಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಸಿಐಡಿ ಈಗಾಗಲೇ ಐದು ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಇತರ ಎರಡು ಪ್ರಕರಣಗಳಲ್ಲಿ ತನಿಖೆ ಇನ್ನೂ ಬಾಕಿ ಇದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ