ಧಾರವಾಡ : ಉತ್ತರ ಪ್ರದೇಶದ ಪ್ರಯಾಗ ರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದುವರೆಗೂ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ ಇನ್ನೂ ಎಂಟು ಜನರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯಿಂದ ಬೆಳಗಾವಿಯ ಇನ್ನೂ 8 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ನಾಪತ್ತೆಯಾದವರನ್ನು ಸಂಪರ್ಕಿಸಲು ನಾವು ಸತತವಾಗಿ ಪ್ರಯತ್ನ ಮಾಡುತ್ತಿದ್ದೇವೆ. 8 ಜನರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.8 ಜನ ನಿನ್ನೆ ರಾತ್ರಿಯಿಂದ ಸಂಪರ್ಕಕ್ಕೆ ಸಿಕ್ಕಿಲ್ಲ ಅವರನ್ನು ಸಂಪರ್ಕಿಸುವ ಕೆಲಸ ಮಾಡುತ್ತಿದ್ದೇವೆ ಈವರೆಗೂ ಅವರ ಬಗ್ಗೆ ಯಾವ ಮಾಹಿತಿಯೂ ಇಲ್ಲ ಎಂದು ಜಗದೀಶ್ ಶೆಟ್ಟರ್ ಆತಂಕ ವ್ಯಕ್ತಪಡಿಸಿದ್ದಾರೆ.