ಬೆಂಗಳೂರು: ಬಿಎಡ್ ವಿದ್ಯಾರ್ಥಿಗಳಿಗೆ ಡಿಸೆಂಬರ್, ಜನವರಿಯಲ್ಲಿ ಹಾಸ್ಟೆಲ್ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸೂರ್ಯ ಮುಕುಂದರಾಜ್.ಎಲ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ವಕೀಲರು ಮತ್ತು ವಿದ್ಯಾ ವಿಷಯಕ ಪರಿಷತ್ ಸದಸ್ಯರಾದಂತ ಸೂರ್ಯ ಮುಕುಂದರಾಜ್.ಎಲ್ ಅವರು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಬಿಎಡ್ ಕಾಲೇಜುಗಳು, ಕೋರ್ಸುಗಳಿಗೆ ಅಡಿಶನ್ ತೆಗೆದುಕೊಳ್ಳುವುದು ಡಿಸೆಂಬರ್ ಜನವರಿ ತಿಂಗಳಲ್ಲಿ. ಆದ್ದರಿಂದ ಬಿಎಡ್ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಪ್ರವೇಶಾತಿ ಸಿಗುವುದಿಲ್ಲ. ಜನವರಿ ತಿಂಗಳಲ್ಲಿ ಹಾಸ್ಟೆಲ್ ಅರ್ಜಿಗಳನ್ನು ನಿಲ್ಲಿಸಿರುತ್ತಾರೆ.
ಆದ್ದರಿಯಿದ ಬಿಎಡ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗದೇ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿರುತ್ತದೆ. ಆದರಿಂದ ಬಿಎಡ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.