ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಮರು ಪರೀಕ್ಷೆಯ ಅಂತಿಮ ಪರಿಷ್ಕೃತ ಕೀ ಉತ್ತರವನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಕಟಿಸಲಾಗಿದೆ.
ಈ ಕುರಿಕಂತೆ ಕೆಪಿಎಸ್ಸಿ ಮಾಹಿತಿ ನೀಡಿದ್ದು, ಆಯೋಗದಿಂದ ದಿನಾಂಕ 29-12-2024ರಂದು ಗೆಜೆಟೆಡ್ ಪ್ರೊಬೈಷನರ್ 384 ಹುದ್ದೆಗಳಿಗೆ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಗಿತ್ತು. ಪೂರ್ವಭಾವಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಪತ್ರಿಕೆ-1 ಮತ್ತು ಪತ್ರಿಕೆ-2 ಕೀ ಉತ್ತರಗಳನ್ನು ದಿನಾಂಕ 15-01-2025ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 22-01-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂಬುದಾಗಿ ತಿಳಿಸಿದೆ.
ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ ಪತ್ರಿಕೆ-1 ಮತ್ತು ಪತ್ರಿಕೆ-2ಗಳಿಗೆ ಸಂಬಂಧಿಸಿದಂತೆ ಅಂತಿಮ ಪರಿಷ್ಕೃತ ಕೀ ಉತ್ತರವನ್ನು ಪ್ರಕಟಿಸಲಾಗಿದೆ ಎಂಬುದಾಗಿ ಹೇಳಿದೆ.
ಪತ್ರಿಕೆ ಒಂದರಲ್ಲಿ ಮೂರು ಪ್ರಶ್ನೆಗಳಿಗೆ ಕೃಪಾಂಕ ನೀಡಿದ್ದರೇ, ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಎರಡು ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿದೆ. ಈ ಮೂಲಕ ಐದು ಪ್ರಶ್ನೆಗಳಿಗೆ ಕೆಎಎಸ್ ಹುದ್ದೆಯ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೃಪಾಂಕ ನೀಡುವ ಮೂಲಕ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.