ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ.
ಇನ್ನೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು ರೂ.18,150ಕ್ಕೆ ಹೆಚ್ಚಳ ಮಾಡಲಾಗಿದೆ.