ಬೆಂಗಳೂರು: ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 11 ವರ್ಷಳಿಂದ ನೀರಿನ ದರ ಏರಿಕೆ ಮಾಡಿಲ್ಲ. ಜಲಮಂಡಳಿಗೆ ವರ್ಷಕ್ಕೆ ಒಂದು ಸಾವಿರ ಕೋಟಿ ನಷ್ಟವಾಗುತ್ತಿದ್ದು ಬೆಲೆ ಏರಿಕೆ ಅನಿವಾರ್ಯ ಬೆಂಗಳೂರು ಜಲಮಂಡಳಿಗೆ ಆಗುತ್ತಿರುವ ನಷ್ಟ ತಪ್ಪಿಸಲು ನಮ್ಮ ಮುಂದೆ ಯಾವುದೇ ಪರ್ಯಾಯ ಆಲೋಚನೆಗಳಿಲ್ಲ ಎಂದು ತಿಳಿಸಿದ್ದಾರೆ.
ಜಲಮಂಡಳಿಯನ್ನು ಉಳಿಸಬೇಕು ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. ಜೊತೆಗೆ ನೀರಿನ ಸಂಪರ್ಕ ಜಾಲವನ್ನು ಹೆಚ್ಚು ಮಾಡಬೇಕಿದೆ. ಇದಕ್ಕೆ ಸುಮಾರು 6 ಸಾವಿರ ಕೋಟಿ ರು. ಬೇಕಾಗಿದ್ದು. ಇದಕ್ಕಾಗಿ ಈಗಲೇ ಎಚ್ಚೆತ್ತು ಕೊಳ್ಳಬೇಕಾಗಿದೆ ಎಂದರು.