ಬೆಳಗಾವಿ : ಬೆಳಗಾವಿ, ಬಾಗಲಕೋಟೆ, ಬೆಳಗಾಗಿ ಸೇರಿದಂತೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬಾಗಕೋಟೆ ಜಿಲ್ಲೆಯ ಹೊಲಗೇರಿ ಗ್ರಾಮಪಂಚಾಯಿತಿ ಪಿಡಿಒ ಹಿರೇಮಠ್ ಅವರ ಮನೆ, ಕಚೇರಿ ಸೇರಿದಂತೆ ಹಲವಡೆ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸಂಜಯ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.