ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬುಧವಾರ ಮಹಾಕುಂಭಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಸಂಗಮದಿಂದ 3 ಕಿ.ಮೀ ದೂರದಲ್ಲಿರುವ ಜೂಸಿ ಘಾಟ್ನಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಜನಸಂದಣಿಯ ಅತಿಯಾದ ಒತ್ತಡದಿಂದಾಗಿ ಜೂಸಿಯಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಕಲ್ಪವಾಸಿ ಪೊಲೀಸ್ ಠಾಣೆಯ ವೃತ್ತಾಧಿಕಾರಿ ರುದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಇನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದರು.