ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ ಎಂದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಧ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ.ಡಿದ್ದಾರೆ.ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.
GOOD NEWS: ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳ
‘ಮೈಕ್ರೋ ಫೈನಾನ್ಸ್’ಗಳ ದೌರ್ಜ್ಯನ್ಯ ನಿಲ್ಲಿಸಲು ಕಾನೂನು ಬೇಕಿದೆ: ಗೃಹ ಸಚಿವ ಪರಮೇಶ್ವರ್