ಬೆಂಗಳೂರು : ನಿನ್ನೆ ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದವರ ಪಟ್ಟಿ ಬಿಡುಗಡೆ ಮಾಡಿದ್ದು, ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಪಕ್ಷದ ವಿರುದ್ಧವಾಗಿ ಯಾರು ಕೆಲಸ ಮಾಡಿದ್ದರು ಅಂತಹವರಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು.
ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯಾಧ್ಯಕ್ಷರಾಗಲು ಬೇಕಾದವರನ್ನು ಜಿಲ್ಲಾಧ್ಯಕ್ಷ ಮಾಡಿದ್ದಾರೆ. ನಾಯಕ ಅಂದರೆ ಒಂದು ಗುಂಪಿನ ನಾಯಕ ಅಲ್ಲ ಒಂದು ಪಕ್ಷದ ನಾಯಕ ಆಗಿರಬೇಕು. ದಾವಣಗೆರೆ ಬೀದರ್ ನಲ್ಲಿ ಚುನಾವಣೆಯಲ್ಲಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ಇದೀಗ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಬಹಳ ಆತಂಕ ಕಾರಿ ಆಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ತಿಳಿಸಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಬಗ್ಗೆ ಚರ್ಚಿಸುತ್ತೇವೆ. ಯಾರನ್ನು ಅಭ್ಯರ್ತಿ ಮಾಡಬೇಕು ಎಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಎರಡು ದಿನ ವಿಸ್ತೃತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಸಂಸತ್ತ ಅಧಿವೇಶನದ ವೇಳೆ ಎಲ್ಲರೂ ದೆಹಲಿಗೆ ಹೋಗುತ್ತೇವೆ. ದೆಹಲಿ ಸಭೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ. ಸಂಸದರು ಮುಖಂಡರ ಜೊತೆಗೆ ಚರ್ಚೆ ಮಾಡುತ್ತೇವೆ. ಪರಿಸರ ನಿರ್ಣಯ ನೋಡಿ ಮುಂದೇನೆ ಹೆಜ್ಜೆ ಇಡುತ್ತೇವೆ ಸಂಸದರು ಮತ್ತು ಮುಖಂಡರ ಜೊತೆಗೆ ಈ ಕುರಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.