ಬೆಂಗಳೂರು : ನಾಡಕಚೇರಿಯ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.
ಹೌದು ವಿಜಯಪುರ ಪಟ್ಟಣದಲ್ಲಿ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗೌತಮ್ ಎನ್ನುವವರ ಬಳಿ ಜಮೀನು ಪೌತಿ ಖಾತೆ ಪೋಡಿ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಎಳುವಳ್ಳಿ ಗ್ರಾಮಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮಲೆಕ್ಕಾಧಿಕಾರಿ ಸುನಿಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಆರ್‌ಐ ಸತ್ಯನಾರಾಯಣ, ಮಡಿವಾಳಪ್ಪ ಮತ್ತು ಸುನಿಲ್ ಎನ್ನುವ ವ್ಯಕ್ತಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ದಾಳಿ ಬಳಿಕ ವಿಜಯಪುರ ಆರ್ ಐ ಸತ್ಯನಾರಾಯಣ ಪರಾರಿಯಾಗಿದ್ದಾರೆ. ಗೌತಮ್ ಎನ್ನುವವರ ಬಳಿ ಮೂವ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.ಲೋಕಾಯುಕ್ತ ಎಸ್ಪಿ ಪವನ್ ನೆಜ್ಜುರ್ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ.