ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಭೀಕರ ಮರ್ಡರ್ ಆಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನನ್ನು ಭೀಕರವಾಗಿ ಕೊಲೆಗೈದ ಬಳಿಕ ದುಷ್ಕರ್ಮಿಗಳು ಶವವನ್ನು ಚರಂಡಿಯಲ್ಲಿ ಬಿಸಾಕಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಮರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಕೊಲೆಗೈದು ಚರಂಡಿಯಲ್ಲಿ ಬಿಸಾಕಿದ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಬರ್ಬರ ಹತ್ಯೆ ಚಿಕ್ಕಬಳ್ಳಾಪುರ ಮರಸನಹಳ್ಳಿಯಲ್ಲಿ ಒಂದು ಘಟನೆ ನಡೆದಿದೆ ಹಾರೋಬಂಡೆ ಗ್ರಾಮದ ಮಾರುತೇಶ್ (30) ಎನ್ನುವ ಯುವಕನನ್ನು ಬರ್ಬರವಾಗಿ ಕೊಲೆಮಾಡಲಾಗಿದೆ.
ಕೊಲೆಯಾದಂತಹ ಮಾರುತೇಶ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಎನ್ನಲಾಗುತ್ತಿದೆ. ಇದೀಗ ಈತನ ಶವ ಚರಂಡಿಯಲ್ಲಿ ಪತ್ತೆಯಾಗಿದೆ. ಸದ್ಯ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಇದೀಗ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.