ಬೆಂಗಳೂರು : ಬೈಕ್ ಮೇಲೆ ತೆರಳುವ ಮಕ್ಕಳಿಗೆ ಹೆಮ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಮಕ್ಕಳಿಗೆ ಕಡ್ಡಾಯ ಹೆಲ್ಮೆಟ್ ಕುರಿತು ಶಿವಮೊಗ್ಗದ ಡಾ.ಅರ್ಚನಾ ಭಟ್ ಸಲ್ಲಿಸಿರುವ ಪಿಐಎಲ್‌ಅನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2022ರ ನಿಯಮ 138 (7)ರ ಪ್ರಕಾರ ಸುರಕ್ಷತಾ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.
ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮವು 9 ತಿಂಗಳಿನಿಂದ ನಾಲ್ಕು ವರ್ಷದ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮಟ್ ಕಡ್ಡಾಯ ಎಂದು ಸ್ಪಷ್ಟಪಡಿಸುತ್ತದೆ. ಆದರೂ ಈವರೆಗೂ ಜಾರಿ ಮಾಡಿಲ್ಲವೆಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ ಎಂದು ತಿಳಿದುಬಂದಿದೆ.