ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹುಬ್ಬಳ್ಳಿಯಲ್ಲೂ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ.
ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.ಮೆಹಬೂಬ್ ವಿವಿಧ ಸಂಘ ಸಂಸ್ಥೆಗಳಲ್ಲಿ ಒಟ್ಟು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು.ಪಡೆದ ಸಾಲಕ್ಕೆ ಪ್ರತಿ ತಿಂಗಳು 40 ಸಾವಿರ ಕಂತಿನಂತೆ ಸಾಲ ಮರುಪಾವತಿ ಮಾಡುತ್ತಾ ಬಂದಿದ್ದರಂತೆ.
ಆದರೂ ಕೂಡಾ ಕೆಲವು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ಹೆಚ್ಚಾದ ಬೆನ್ನಲೆ ಮೆಹಬೂಬ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಟುಂಬಸ್ಥರ ಗಮನಕ್ಕೆ ಬಂದ ಕೂಡಲೇ ವ್ಯಕ್ತಿಯನ್ನು ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಕುರಿತು ಹುಬ್ಬಳ್ಳಿ ಕಮರಿಪೇಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.