ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್ ಮಂಡನೆಗೆ ಅನುಮೋದನೆ ಸಿಕ್ಕಿದೆ.
ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ.