ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಶಿರಾಳಕೊಪ್ಪ ರಸ್ತೆಯಲ್ಲಿ ಅಪರಿಚಿತವಾಹನವೊಂದು ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದರು.
ಅಂದಹಾಗೇ ಉಳವಿ ಸಮೀಪದ ಶಿರಾಳಕೊಪ್ಪ ರಸ್ತೆಯಲ್ಲಿ ದಟ್ಟ ಕಾಡಿದೆ. ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಂಕೆಯ ಹಿಂಡು ಇಂದು ಮುಂಜಾನೆ ಸಾಗುತ್ತಿದ್ದಂತ ವೇಳೆಯಲ್ಲಿ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಹಿಂಬದಿಯ ಕಾಲು ಮುರಿತಕ್ಕೊಳಗಾಗಿದ್ದಂತ ಜಿಂಕೆಯನ್ನು ದಾರಿ ಹೋಕರು ಸತ್ಕರಿಸಿ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಪಶುವೈದ್ಯರೊಂದಿಗೆ ಆಗಮಿಸುವ ವೇಳೆಗಾಗಲೇ ಗಂಭೀರವಾಗಿ ಗಾಯಗೊಂಡಿದ್ದಂತ ಜಿಂಕೆ ಸಾವನ್ನಪ್ಪಿತ್ತು. ಅದನ್ನು ಮರಣೋತ್ತರ ಪರೀಕ್ಷೆಗಾಗಿ ಸೊರಬಕ್ಕೆ ಕೊಂಡೊಯ್ಯಲಾಗಿದೆ ಎಂಬುದಾಗಿ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೋಗೇಶ್ ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab