ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದ್ದು, ಸಾಲ ಕಟ್ಟಲಾಗದೇ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿದ್ದ ಮಹಿಳೆ ಸಾವನ್ನಪ್ಪಿದ್ದರು. ಇದೀಗ ಮಹಿಳೆಯ ಪುತ್ರ ಕೂಡ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಕಂತು ಕಟ್ಟದ ಹಿನ್ನೆಲೆಯಲ್ಲಿ ಉಜ್ಜೀವನ್ ಬ್ಯಾಂಕ್ ಸಿಬ್ಬಂದಿ ಮನೆಯನ್ನು ಸೀಜ್ ಮಾಡಿದ್ದರು. ಹೀಗಾಗಿ ನೋಂದ ಮಹಿಳೆ ಪ್ರೇಮಾ ಅವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಪುತ್ರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೇಮಾ ಅವರ ಮಗ ರಂಜಿತ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.