ನವದೆಹಲಿ : ಕೇಂದ್ರ ಸರ್ಕಾರವು ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊಸ ಆರೋಗ್ಯ ಯೋಜನೆ ಜಾರಿಗೆ ತರಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದಾಖಲೆಯ 8 ನೇ ಬಾರಿಗೆ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್ ಅವರು, 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಹೊಸ ಆರೋಗ್ಯ ಯೋಜನೆ ಜಾರಿಗೆ ತಲಾಗುವುದು, ಇದು ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿದೆ ಎಂದು ತಿಳಿಸಿದ್ದಾರೆ.
ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ಅವರು ಘೋಷಿಸಿದರು.
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 6 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.








![ವಿಡಿಯೊ: ಮಲ್ಲಿಗೆ ಮುಡಿದು, ತೆಳು ನೀಲಿ ಸೀರೆಯಲ್ಲಿ ವಿಜಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ತ್ರಿಶಾ ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-450x253.jpg)