ಮಂಡ್ಯ : ಸಿಎಂ ಸಿದ್ಧರಾಮಯ್ಯ ಅವರ ವಾರ್ನಿಂಗ್ ನಡುವೆಯೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಈಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಾಯಿಯ ಸಾವಿನ ಸುದ್ದಿಯನ್ನು ಕೇಳಿದಂತ ಪುತ್ರ ರಂಜಿತ್ ಎಂಬುವರು ಹಲಗೂರು ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಂದಹಾಗೇ ಪ್ರೇಮಾ ಅವರು ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲದ ಕಂತು ಕಟ್ಟದ ಕಾರಣಕ್ಕೆ ಬ್ಯಾಂಕ್ ಸಿಬ್ಬಂದಿ ಪ್ರೇಮಾ ಅವರ ಮನೆ ಸೀಜ್ ಮಾಡಿದ್ದರಂತೆ. ಈ ಕಾರಣಕ್ಕೆ ಮನನೊಂದು ಪ್ರೇಮಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಪುತ್ರನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಂಡ್ಯದಲ್ಲಿ ತಾಯಿ-ಮಗ ಆತ್ಮಹತ್ಯೆಗೆ ಶರಣಾಗಿದಂತೆ ಆಗಿದೆ.
ಇಂದಿನ ‘ಕೇಂದ್ರ ಬಜೆಟ್’ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab