ಹಾಸನ : ಹಾಸನ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಮಾವ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯಾದಪುರ ಬೈಪಾಸ್ ಬಳಿ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾವ ಗಂಗಾಧರ್ (50) ಹಾಗೂ ಸೊಸೆ ಪ್ರಿಯಾ (20) ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಅರಸೀಕೆರೆಯಿಂದ ಮುಂಡಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ತಿರುವಿನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಗಂಗಾಧರ ಹಾಗೂ ಪ್ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.