ಬಳ್ಳಾರಿ : ಬಳ್ಳಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿದ್ದು, ಹಲವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಬಳ್ಳಾರಿ ತಾಳೂಕಿನ ಹಲಕುಂದಿ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೆಎಸ್ ಆರ್ ಟಿಸಿ ಬಸ್ ಬೆಂಗಳೂರಿನಿಂದ ರಾಯಚೂರು ಕಡೆಗೆ ಹೋಗುತ್ತಿದ್ದು, ಈ ವೇಳೆ ಬಳ್ಳಾರಿಯ ಹಲಕುಂದಿ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.