ಬೆಂಗಳೂರು : ಬೆಂಗಳೂರಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ NSUI ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಯತ್ನಿಸಿರುವ ಘಟನೆ ನಡೆದಿದೆ.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಖಂಡಿಸಿ ಬೆಂಗಳೂರಿನ ಅಲಿ ಆಸ್ಕರ್ ರಸ್ತೆಯಲ್ಲಿರುವ ರಾಜ್ಯಸಭಾ ಸದಸ್ಯರ ಕಚೇರಿಗೆ ಎನ್ ಎಸ್ ಯುಐ ವಿದ್ಯಾರ್ಥಿ ಸಂಘಟನೆ ಮುತ್ತಿಗೆ ಯತ್ನಿಸಿದೆ.
ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದಿದ್ದಾರೆ.