ಬಳ್ಳಾರಿ: ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಂತ 165 ಕ್ವಿಂಟಾಲ್ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾರಿ ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
ಬಳ್ಳಾರಿಯ ಸಿರಗುಪ್ಪ ಬಳಿಯಲ್ಲಿ ಲಾರಿಯೊಂದರಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಬೇಕಿದ್ದಂತ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಈ ಮಾಹಿತಿ ತಿಳಿಯುತ್ತಿದ್ದಂತೆ ಅಲರ್ಟ್ ಆದಂತ ಸಿರಗುಪ್ಪ ಠಾಣೆಯ ಪೊಲೀಸರು 165 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಂತ ಲಾರಿಯನ್ನು ಸೀಜ್ ಮಾಡಿದ್ದಾರೆ.
ಲಾರಿ ಚಾಲಕ ಸಣ್ಣ ದುರುಗಪ್ಪ ಎಂಬುವರನ್ನು ಬಂಧಿಸಿರುವಂತ ಪೊಲೀಸರು, ಆತನ ವಿರುದ್ಧ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಅಂದಹಾಗೇ 165 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯ ಮೌಲ್ಯ ಬರೋಬ್ಬರಿ 4 ಲಕ್ಷದ 77 ಸಾವಿರ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸಿರಗುಪ್ಪ ಠಾಣೆಯ ಪೊಲೀಸರು ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದವರ ಪತ್ತೆಗೆ ಬಲೆ ಬೀಸಿದ್ದಾರೆ.
BIG NEWS: ‘ಸಚಿವ ಹೆಚ್.ಕೆ ಪಾಟೀಲ್’ಗೆ ಸಿಎಂ ಆಗುವ ಯೋಗ ಕೂಡಿ ಬರಲಿದೆ: ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಭವಿಷ್ಯ
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!