ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.
ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡವನ್ನು ದೋಚುತ್ತಿದ್ದ ಇಬ್ಬರು ಅರೆಸ್ಟ್
ನಿಮ್ಮ ಸಂಬಳದ ಮೇಲೆ ‘ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ’ಗಳು ಹೇಗೆ ಪರಿಣಾಮ ಬೀರುತ್ತೆ? ಇಲ್ಲಿದೆ ಮಾಹಿತಿ