ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮರ್ಸಿಡಿಸ್ ಬೆಂಝ್ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಚಾಲಕನನ್ನು ಪರಶುರಾಮ್ ದಾದನವ್ರೆ (34) ಎಂದು ಗುರುತಿಸಲಾಗಿದ್ದು, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರು ವಿದೇಶಿ ಪ್ರಜೆಗಳನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ವಿಮಾನ ನಿಲ್ದಾಣದ ಸಿಬ್ಬಂದಿ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕ ಮದ್ಯದ ಅಮಲಿನಲ್ಲಿದ್ದಂತೆ ತೋರದಿದ್ದರೂ, ದಾದಾನವ್ರೆ ಆಕಸ್ಮಿಕವಾಗಿ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಪರಿಣಾಮ ವಿಮಾನ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!