ಬೆಂಗಳೂರು : ಮಂಡಿನೋವು ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಸಿದ್ದರಾಮಯ್ಯ ಅವರ ತಪಾಸಣೆ ನಡೆಸಿದ ವೈದ್ಯರು, ಸಿಎಂ ಸಿದ್ದರಾಮಯ್ಯಗೆ ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅದೇ ಜಾಗದಲ್ಲಿ ಒತ್ತಡ ಬಿದ್ದಿರುವುದರಿಂದ ನೋವು ಹೆಚ್ಚಾಗಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. 2 ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ.
ಮಂಡಿ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಹಿನ್ನೆಲೆಯಲ್ಲಿ ಇಂದು ನಿಗದಿ ಪಡಿಸಲಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.