ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ದಿನಾಂಕ:27.01.2025 ರಿಂದ 02.02.2025 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರುಗಳ ವಿರುದ್ಧ & ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಕೈಗೊಂಡಿರುತ್ತದೆ.
ವಿಶೇಷ ಕಾರ್ಯಾಚರಣೆಯಲ್ಲಿ ದಾಖಲು ಮಾಡಿರುವ ಪ್ರಕರಣಗಳ ವಿವರ ಈ ಕೆಳಕಂಡಂತಿರುತ್ತದೆ.
ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ & ಅತಿವೇಗ ವಾಹನ ಚಲಾಯಿಸುವವರ ಹಾವಳಿಯನ್ನು ತಡೆಗಟ್ಟಲು ಮತ್ತು ರಸ್ತೆ, ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.