ಬೆಂಗಳೂರು : 545 ಪಿಎಸ್ ಐ ನೇಮಕಾತಿ ಹಗರಣವನ್ನು ರಾಜ್ಯ ಸರ್ಕಾರವು ಮರು ತನಿಖೆಗೆ ಆದೇಶಿಸಿದ್ದು, ಇದೀಗ ಎಸ್ ಐಟಿ ಶಾಸಕ ಅಶ್ವತ್ಥ್ ನಾರಾಯಣ್ ಅವರನ್ನು ವಿಚಾರಣ ನೆಡಸಿದೆ.
ಇಂದು ಬೆಂಗಳೂರಿನಲ್ಲಿ ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಪಿಎಸ್ ಐ ನೇಮಕಾತಿಯಲ್ಲಿ ಮಾಗಡಿ ಮೂಲದ ಸಂಬಂಧೀಕರೇ ಆಯ್ಕೆ ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಪಿಎಸ್ ಐ ನೇಮಕಾತಿ ಅಕ್ರಮ ಸಂಬಂಧ ಎಸ್ ಐ ಟಿ ವಿಚಾರಣೆಗೆ ಹಾಜರಾಗಿರುವ ಅಶ್ವತ್ ನಾರಾಯಣ ಅವರು ನನಗೂ ಪಿಎಸ್ ಐ ನೇಮಕಾತಿ ಹಗರಣಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.