ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಿಯಂತ್ರಣ ತಪ್ಪಿ ಕಾರು ಬಿಸಿ ನಾಲಿಗೆ ಬಿದ್ದ ಪರಿಣಾಮಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನಪ್ಪಿದ್ದು ಇನ್ನಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ವಿಸಿ ನಾಲಿಗೆ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿದ್ದ ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ನೀರು ಪಾಲಾಗಿರುವ ಘಟನೆ ನಡೆದಿದ್ದು ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.ಪಾಂಡವಪುರದಿಂದ ಮಂಡ್ಯ ಕಡೆಗೆ ಬರುವ ವೇಳೆ ಈ ಒಂದು ಅವಘಡ ಸಂಭವಿಸಿದೆ. ಶಿವಳ್ಳಿ ಠಾಣೆ ಪೊಲೀಸರಿಂದ ಈ ಒಂದು ಕಾರ್ಯಚರಣೆ ಮುಂದುವರೆದಿದೆ.