ಬೆಂಗಳೂರು : ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಹಾಗಾಗಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ಗ್ರೇಟ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ. ಕಳೆದ ಬಾರಿ ಮೂರು ಪರೀಕ್ಷೆ ಬಗ್ಗೆ ಗೊಂದಲ ಮೂಡಿತ್ತು. ಆದರೆ ಈ ಬಾರಿ ಎಲ್ಲರಿಗೂ ಕ್ಲಿಯರ್ ಆಗಿದೆ. ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ಹಾಗಾಗಿ ಈ ಬಾರಿ ಯಾವುದೇ ರೀತಿಯಾದಂತಹ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ತಿಳಿಸಿದರು.