ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಅವಧಿಯನ್ನು 25ನೇ ಫೆ. 2025 ರವೆರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ.
2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು 4ನೇ ಫೆಬ್ರವರಿ 2025 ರೊಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗುವ ದೃಷ್ಟಿಯಿಂದ ಆ ಅವಧಿಯನ್ನು 25ನೇ ಫೆಬ್ರವರಿ 2025 ರವರೆಗೆ ವಿಸ್ತರಿಸಲಾಗಿದೆ.
ನಗರದ ಎಲ್ಲಾ ವರ್ಗಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು, ಪೌರಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗ, ವಿಶೇಷ ಚೇತನರ ವರ್ಗ, ತೃತೀಯ ಲಿಂಗಿಗಳು ಮತ್ತು ಮಹಿಳಾ ವರ್ಗದ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಅಂತರ್ಜಾಲ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ:
1. ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ.
2. ಶೈಕ್ಷಣಿಕ ಕಾರ್ಯಕ್ರಮದಡಿಯಲ್ಲಿ ಶಾಲಾ ಶುಲ್ಕ ಮರುಪಾವತಿ / ಉನ್ನತ ವ್ಯಾಸಂಗಕ್ಕೆ / ವಿದೇಶ ವ್ಯಾಸಂಗಕ್ಕಾಗಿ ಸಹಾಯಧನ.
3. ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಗಂಭೀರ ಸ್ವರೂಪ ಕಾಯಿಲೆಗಳಿಗೆ / ಹಿರಿಯ ನಾಗರೀಕರ ಆರೋಗ್ಯ ತಪಾಸಣೆ / ವಿಶೇಷ ಚೇತನರಿಗೆ ಅಂಗ ಜೋಡಣೆ / ಅಂಗವೈಫಲ್ಯ ಸರಿಪಡಿಸುವ ಶಸ್ತ್ರಚಿಕಿತ್ಸೆಗೆ / ವಿಶೇಷ ಚೇತನರಿಗೆ ಫೀಜಿಯೋತೆರಫಿಗೆ ಸಹಾಯಧನ.
4. ಆರ್ಥಿಕ ಸಹಾಯ ಹಾಗೂ ಪ್ರೋತ್ಸಾಹ ಧನದಡಿಯಲ್ಲಿ ಸಂಗೀತ ಸಾಧನ ಖರೀದಿಸಲು / ಕ್ರೀಡಾಪಡುಗಳಿಗೆ, ಸಣ್ಣ ಉದ್ಯಮ ಹಾಗೂ ಸ್ವಯಂ ಉದ್ಯೋಗಕ್ಕೆ / ವಿಶೇಷ ಚೇತನರಿಗೆ ಮೆಡಿಕಲ್ ಶಾಫ್‌ಗೆ / ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸ್ವಂತ ಸಣ್ಣ ಕೈಗಾರಿಕೋದ್ಯಮ ಸ್ಥಾಪಿಸಲು / ಆಟೋ, ಕಾರ್ ಖರೀದಿಸಲು ಸಹಾಯಧನ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ.
5. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿರುವ / ನಡೆಸುವ ಸಂಘಸಂಸ್ಥೆಗಳಿಗೆ / ವಿಶೇಷ ಚೇತನ ಸಂಸ್ಥೆಗಳಿಗೆ ವಿದ್ಯಾಸಂಸ್ಥೆಗಳಿಗೆ ಆರ್ಥಿಕ ಸಹಾಯ.
6. ಪೌರಕಾರ್ಮಿಕರಿಗೆ ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕಲ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು).
7. ಮಹಿಳಾ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.
8. ವಿಶೇಷ ಚೇತನರಿಗೆ ಹೆಚ್ಚುವರಿಯಾಗಿ ಅಳವಡಿಸಿರುವ ಉಚಿತ ದ್ವಿಚಕ್ರ ವಾಹನ ವಿತರಣೆ.
9. ವಿಶೇಷ ಚೇತನರಿಗೆ ಉಚಿತ ಎಲೆಕ್ಟ್ರಿಕಲ್ ವೀಲ್ ಚೇರ್ ವಿತರಣೆ.
10. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಬೀದಿ ಬದಿ ವ್ಯಾಪಾರಿಗಳಿಗೆ ಇ-ಮಾರಾಟ ವಾಹನ ಖರೀದಿಗೆ ಸಹಾಯಧನ ಶೇ.90ರಷ್ಟು ಅಥವಾ ರೂ.1.50 ಲಕ್ಷಗಳವರೆಗೆ ಯಾವುದು ಕಡಿಮೆಯೋ ಸದರಿ ಮೊತ್ತದ ಸಹಾಯಧನ.
11. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ, ಪೌರ ಕಾರ್ಮಿಕರ ಮಕ್ಕಳಿಗೆ ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಪಾಲಿಕೆ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳು ಲಭ್ಯ:
ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಪಾಲಿಕೆ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳನ್ನು ನೀಡಲಾಗಿದೆ. ಅರ್ಹ ಫಲಾನುಭಿಗಳು ಪಾಲಿಕೆ ವೆಬ್ ಸೈಟ್ ಅಥವಾ
https://site.bbmp.gov.in/departmentwebsites/welfare/ ಅಥವಾ https://site.bbmp.gov.in/departmentwebsites/welfare/welfareactivities.html ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಅನುದಾನದ ಲಭ್ಯತೆಯನ್ನು ಪರಿಗಣಿಸಿ ಮೇಲ್ಕಂಡ ಕಾರ್ಯಕ್ರಗಳಿಗೆ ಆಯ್ಕೆಯಾಗುವ ಫಲಾನುಭವಿಗಳಿಗೆ ಸೌಲಭ್ಯವನ್ನು ನೀಡಲಾಗುವುದು.
ಪಾಲಿಕೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿಯಂತೆ 2024-25ನೇ ಸಾಲಿನ ಪಾಲಿಕೆಯ ಅನುಮೋದಿತ ಮಾರ್ಗಸೂಚಿಗಳ ಅನುಸಾರ ಅರ್ಜಿಯನ್ನು ಪಾಲಿಕೆಯ ವಲಯ ಜಂಟಿ ಆಯುಕ್ತರ ಕಛೇರಿಗಳಲ್ಲಿರುವ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ರವರ ಕಛೇರಿಯಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಭೌತಿಕ ಅರ್ಜಿಗಳನ್ನು *ದಿನಾಂಕ: 25-02-2025 ರೊಳಗೆ ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ರವರ ಕಛೇರಿಗಳಲ್ಲಿ ಸಲ್ಲಿಸಬಹುದಾಗಿದೆ.
BIG NEWS: ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ‘ಸರ್ಕಲ್’ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಸಚಿವ ಮಂಕಾಳು ವೈದ್ಯ