ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ. ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಕೊಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ತಯಾರಿ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೂರು ಬಾರಿ ಪಾರ್ಷಿಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೂ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡ ಈಗ ಮಕ್ಕಳಿಗೆ ಅರ್ಥವಾಗಿದೆ. ಇವತ್ತು ವಿದ್ಯಾರ್ಥಿಗಳಿಗೆ ಇರುವಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು ಎಂದರು.
ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆಗೆ ಚರ್ಚೆ ಮಾಡಲಾಗಿದೆ. ಈ ಬಾರಿ ಫಲಿತಾಂಶ ಜಾಸ್ತಿ ಆಗುವ ನಿರೀಕ್ಷೆಯಿದೆ. ಶಿಕ್ಷಕರಿಗೆ ಮಕ್ಕಳಿಗೆ ಪರೀಕ್ಷಾ ಒತ್ತಡ ಹಾಕದಂತೆ ಸೂಚಿಸಿದ್ದೇನೆ ಎಂದರು.
ಸಿಎಂ ಸಿದ್ಧರಾಮಯ್ಯ ಅವರು ಈ ಹಿಂದಿನ ಸಭೆಯಲ್ಲಿ ಗ್ರೇಸ್ ಅಂಕದ ಬಗ್ಗೆ ಗರಂ ಆಗಿದ್ದರು. ಗ್ರೇಸ್ ಅಂಕ ಕೊಡಬಾರದಿತ್ತು ಅಂತ ತಿಳಿಸಿದ್ರು. ಈ ಹಿನ್ನಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗ್ರೇಸ್ ಅಂಕ ಕೊಡೋದಿಲ್ಲ. ಕೋವಿಡ್ ವೇಳೆಯಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡಲಾಗಿತ್ತು. ಆದೇ ಈ ಬಾರಿ ನೀಡುವುದಿಲ್ಲ ಎಂಬುದಾಗಿ ತಿಳಿಸಿದರು.
Good News: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ BBMP ಆದೇಶ