ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆನೆ ಮೂಲಕ ಮಸೂದೆ ತರಲು ಒಪ್ಪಿಗೆ ಸೂಚಿಸಲಾಗಿತ್ತು. ಈ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ ಮಾಡಿದ ನಂತ್ರ ರಾಜ್ಯ ಸರ್ಕಾರ ಡ್ರಾಫ್ಟ್ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಇನ್ನೇನಿದ್ದರೂ ಅಂಕಿತ ಮಾತ್ರ ಬಾಕಿ ಉಳಿದಂತೆ ಆಗಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡುವುದನ್ನು ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರುವಂತ ನಿರ್ಧಾರವನ್ನು ಸರ್ಕಾರ ಮಾಡಿತ್ತು. ಅದರಂತೆ ಸಂಪುಟ ಸಭಎಯಲ್ಲೂ ಒಪ್ಪಿಗೆಯನ್ನು ಸೂಚಿಸಲಾಗಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದು, ಶಿಕ್ಷೆಯ ಪ್ರಮಾಣದಲ್ಲಿ ಕೆಲ ಬದಲಾವಣೆ ಮಾಡಲಾಗಿತ್ತು.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು 3 ವರ್ಷದಿಂದ 10 ವರ್ಷ ಜೈಲು ಶಿಕ್ಷೆಗೆ ಬದಲಾವಣೆ ಮಾಡಿದಂತ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ಸರ್ಕಾರ ಕಳುಹಿಸಿಕೊಟ್ಟಿದೆ. ಇನ್ನೂ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ನೀಡಿದ್ದೇ ಆದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕರ್ನಾಟಕದಲ್ಲಿ ಬ್ರೇಕ್ ಬೀಳಲಿದೆ.