ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ.
ರಾಜ್ಯ ಸರ್ಕಾರವು ಗೌರವಧನ ಹೆಚ್ಚಳದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ.
ಕರ್ನಾಟಕ ರಾಜ್ಯ (ಎಐಟಿಯುಸಿ) ನೇತೃತ್ವದಲ್ಲಿ ಧರಣಿ ನಡೆಸಿದ ಸಾವಿರಾರು ಸಿಬ್ಬಂದಿ ಚುನಾವಣೆ ವೇಳೆ ಖಾನಾಪುರದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ್ದ ಭರವಸೆಯಂತೆ ಆರನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಜಾರಿಗೊಳಿಸುವಂತೆ ಒತ್ತಾಯಿಸಿದರು. ಹೋರಾಟ ಸ್ಥಳಕ್ಕೆ ಸಂಜೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆಗಮಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಸ್ವೀಕರಿಸಿ, ಮುಂಬರುವ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲಿದ್ದೇವೆ. ಧರಣಿ ಹಿಂಪಡೆದು ಕರ್ತವ್ಯಕ್ಕೆ ಮರಳುವಂತೆ ಕೋರಿದರು.